ಮನೆ ದೇಶ ಮೋದಿ ಸರ್ಕಾರದ ಅವಧಿಯಲ್ಲಿ ಭಾರತ ಮಾತೆ ತಲೆ ತಗ್ಗಿಸುವಂತಾಗಿದೆ: ಸುಬ್ರಹ್ಮಣ್ಯನ್ ಸ್ವಾಮಿ

ಮೋದಿ ಸರ್ಕಾರದ ಅವಧಿಯಲ್ಲಿ ಭಾರತ ಮಾತೆ ತಲೆ ತಗ್ಗಿಸುವಂತಾಗಿದೆ: ಸುಬ್ರಹ್ಮಣ್ಯನ್ ಸ್ವಾಮಿ

0

ನವದೆಹಲಿ(NewDelhi): ಮೋದಿ ಸರ್ಕಾರದ 8 ವರ್ಷಗಳ ಅವಧಿಯಲ್ಲಿ, ಭಾರತ ಮಾತೆ ನಾಚಿಕೆಯಿಂದ ತಲೆ ತಗ್ಗಿಸಬೇಕಾಗಿ ಬಂತು ಎಂದು ಭಾರತದ ವಿದೇಶಾಂಗ ನೀತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಸೋಮವಾರ ಕಟುವಾಗಿ ಟೀಕಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ನಾವು ಲಡಾಖ್‌ನಲ್ಲಿ ಚೀನಿಯರ ಎದುರು ತೆವಳಿ ನಡೆಯಬೇಕಾಯಿತು, ರಷ್ಯನ್ನರ ಮುಂದೆ ಮಂಡಿಯೂರಬೇಕಾಯಿತು, ಕ್ವಾಡ್‌ ಸಭೆಯಲ್ಲಿ ಅಮೆರಿಕನ್ನರ ಮುಂದೆ ‘ಮಿಯಾಂವ್’ ಎನ್ನಬೇಕಾಯಿತು. ಈಗ ಚಿಕ್ಕ ರಾಷ್ಟ್ರ ಕತಾರ್ ಎದುರು ಸಾಷ್ಟಂಗ ನಮಸ್ಕಾರ ಮಾಡಿದ್ದೇವೆ. ನಮ್ಮ ವಿದೇಶಾಂಗ ನೀತಿಯ ಅಧಃಪತನವಾಗಿದೆ’ ಎಂದು ಅವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾದಿ ಮುಹಮ್ಮದ್‌ ವಿರುದ್ಧದ ಬಿಜೆಪಿ ನಾಯಕರ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕತಾರ್ ಮತ್ತು ಕುವೈತ್‌ನ ವಿದೇಶಾಂಗ ಸಚಿವಾಲಯಗಳು ಭಾರತದ ರಾಯಭಾರಿಗಳನ್ನು ಕರೆಸಿ ಖಂಡನಾ ನಿರ್ಣಯದ ಅಧಿಕೃತ ಟಿಪ್ಪಣಿಯನ್ನು ಹಸ್ತಾಂತರಿಸಿವೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಕತಾರ್‌ ಭೇಟಿ ವೇಳೆ ಈ ಬೆಳವಣಿಗೆ ನಡೆದಿದೆ.

ಭಾರತದ ಉತ್ಪನ್ನಗಳನ್ನು ಖರೀದಿ ಮಾಡಬಾರದು ಎಂಬ ಅಭಿಯಾನವೂ ಆ ದೇಶಗಳಲ್ಲಿ ನಡೆದಿದೆ.ಈ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ಇಲಾಖೆಯು ಎರಡೂ ದೇಶಗಳಿಗೆ ಸ್ಪಷ್ಟನೆ ನೀಡಿದೆ. ಇನ್ನೊಂದಡೆ ಕೇಂದ್ರ ಸರ್ಕಾರದ ನೇತೃತ್ವ ವಹಿಸಿರುವ ಬಿಜೆಪಿಯು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರಿಗೆ ಅಮಾನತು ಮತ್ತು ಉಚ್ಚಾಟನಾ ಶಿಕ್ಷೆ ನೀಡಿದೆ.