ಮನೆ ಅಪರಾಧ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

0

ಬೆಂಗಳೂರು: ಇಲ್ಲಿನ ಮಹದೇವಪುರ ಸಮೀಪದ ಬೈಕ್ ಶೋರೂಂ ಒಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಸುಮಾರು 50 ಕ್ಕಿಂತಲೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿರುವುದಾಗಿ ಗುರುವಾರ (ಜ.02) ಪೊಲೀಸರು ತಿಳಿಸಿದ್ದಾರೆ.

Join Our Whatsapp Group

ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಆಕಸ್ಮಿಕ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಶೋರೂಂ ಮುಚ್ಚಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಿಂದ ದಟ್ಟ ಹೊಗೆ ಹೊರಬೀಳುತ್ತಿರುವುದನ್ನು ಗಮನಿಸಿದ ಅಲ್ಲಿನ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.