ಮನೆ ಉದ್ಯೋಗ ಕೊಡಗು ಡಿಸಿಸಿ ಬ್ಯಾಂಕ್​ ನಲ್ಲಿ ಕಿರಿಯ ಸಹಾಯಕರ ನೇಮಕಾತಿ

ಕೊಡಗು ಡಿಸಿಸಿ ಬ್ಯಾಂಕ್​ ನಲ್ಲಿ ಕಿರಿಯ ಸಹಾಯಕರ ನೇಮಕಾತಿ

0

ಬೆಂಗಳೂರು: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್​ (ಡಿಸಿಸಿ)ನಲ್ಲಿ ಖಾಲಿ ಇರುವ ಗ್ರೂಪ್​ ಸಿ ವೃಂದದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 32 ಕಿರಿಯ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Join Our Whatsapp Group

ಹುದ್ದೆ ವಿವರ: ಒಟ್ಟು 32 ಕಿರಿಯ ಸಹಾಯಕರ ಹುದ್ದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಕನಿಷ್ಠ 6 ತಿಂಗಳ ಕಂಪ್ಯೂಟರ್​ ತರಬೇತಿ ಕೋರ್ಸ್​ ಮಾಡಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷವಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ಮತ್ತು ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: 30,350 – 58,250 ರೂ ಮಾಸಿಕ.

ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 1750 ರೂ ಹಾಗೂ ಪ.ಜಾ, ಪ.ಪಂ, ಪ್ರವರ್ಗ 1, ಮಹಿಳೆಯರು ಮತ್ತು ಅಂಗವಿಕಲರಿಗೆ 1250 ರೂ ಅರ್ಜಿ ನಿಗದಿಸಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಜನವರಿ 16 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಸೂಚನೆಗೆ ಅಭ್ಯರ್ಥಿಗಳು kodagudccbank.com ಇಲ್ಲಿಗೆ ಭೇಟಿ ನೀಡಿ.