ಹುಬ್ಬಳ್ಳಿ: ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯನವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್, ಸಿಎಂ ಸಿದ್ದರಾಮಯ್ಯನವರಿಗೆ ಯಾಕೆ ಈ ಆಸೆ ಹುಟ್ಟಿತು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಇದನ್ನ ಬೇಡ ಅಂದ್ರೆ ಎಲ್ಲಾ ಮುಗಿದು ಹೋಗುತ್ತದೆ. ಒಂದು ರಸ್ತೆಗೆ ಇಷ್ಟೆಲ್ಲಾ ವಿವಾದನಾ..? ಎಂದು ಟೀಕಿಸಿದರು.
ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರು ಬಿಎಸ್ ಯಡಿಯೂರಪ್ಪ ಅವರ ಮಾದರಿ ಅನುಸರಿಸಲಿ ಎಂದು ಜಗದೀಶ್ ಶೆಟ್ಟರ್ ಸಲಹೆ ನೀಡಿದರು.














