ಮನೆ ಅಪರಾಧ ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹತ್ಯೆ

ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹತ್ಯೆ

0

ಗದಗ: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ಶುಕ್ರವಾರ ನಡೆದಿದೆ.

Join Our Whatsapp Group

ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್. ಇವರು ಗದಗ ಕೇಂದ್ರ ಬಸ್ ನಿಲ್ದಾಣ ಬಳಿಯ ಪಲ್ಲವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಲಾಡ್ಜ್ ಕೊಠಡಿಯ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ನಗರದ ನಿವಾಸಿ ಶಂಕರಗೌಡ ಪಾಟೀಲ್ ರೂಂ ನಂಬರ್‌ 513 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗ್ಗೆ 7.30ಕ್ಕೆ ಚಹಾ ಕುಡಿದು ಮನೆಯಿಂದ ಹೊರಬಂದ ಇಂಜಿನಿಯರ್ನಂತರ ಲಾಡ್ಜ್ ಗೆ ಆಗಮಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂಜಿನಿಯರ್ ಆತ್ಮಹತ್ಯೆ ಹಲವು ಅನುಮಾನ ಮೂಡಿಸಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗದಗನ ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.