ಹೊನ್ನಾವರ: ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಹತ್ತಿರ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ.
ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಹೊನ್ನಾವರ ಕಡೆ ಬರುತ್ತಿದ್ದ ಲಾರಿ ಪಲ್ಟಿಯಾಗಿದೆ.
ಮೃತರು ಮತ್ತು ಗಾಯಾಳುಗಳು ಮೂಲತ ಬಿಹಾರ ರಾಜ್ಯದವರು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ನಳಂದಾ ಜಿಲ್ಲೆಯ ಸಜ್ಜನ ಕುಮಾರ್, ಗಯಾ ಜಿಲ್ಲೆಯ ಗಣವ್ರಿ ಮತ್ತು ಪಾಟ್ನಾ ಜಿಲ್ಲೆಯ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ.
ಮೂವರು ಗಾಯಳುಗಳನ್ನು ಹೊನ್ನಾವರದ ತಾಲೂಕ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.














