ಮನೆ ಅಪರಾಧ ಬೈಕ್- ಕೆಎಸ್ ​ಆರ್ ​​​ಟಿಸಿ ಬಸ್​ ಡಿಕ್ಕಿ – ತಂದೆ, ಇಬ್ಬರು ಮಕ್ಕಳು ಸಾವು

ಬೈಕ್- ಕೆಎಸ್ ​ಆರ್ ​​​ಟಿಸಿ ಬಸ್​ ಡಿಕ್ಕಿ – ತಂದೆ, ಇಬ್ಬರು ಮಕ್ಕಳು ಸಾವು

0

ರಾಮನಗರ: ಬೈಕ್ ಹಾಗೂ ಕೆಎಸ್​ಆರ್​​​ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ತಂದೆ ಹಾಗೂ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ರಾಮನಗರದ ಅಚಲು ಗ್ರಾಮದ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

Join Our Whatsapp Group

ಕನಕಪುರ-ರಾಮನಗರ ಹೆದ್ದಾರಿಯಲ್ಲಿನ ಅಚಲು ಗ್ರಾಮದ ಸಮೀಪ ಟಿವಿಎಸ್ ಬೈಕ್​ನಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ತೆರಳುತ್ತಿದ್ದರು. ಈ ವೇಳೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಮಗ, ಮಗಳು ಹಾಗೂ ತಂದೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರಾಗಿದ್ದು, ರಾಮನಗರ ತಾಲೂಕಿನ ದಾಸೇಗೌಡನದೊಡ್ಡಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಘಟನೆಯಲ್ಲಿ ಬೈಕ್​ ಸವಾರನ ಪತ್ನಿಗೂ ಗಂಭೀರ ಗಾಯಗಳಾಗಿದೆ. ಅವರನ್ನು ಚಿಕಿತ್ಸೆಗಾಗಿ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಮನಗರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.