ಮನೆ ಅಪರಾಧ ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಮಗನಿಂದಲೇ ತಂದೆ – ತಾಯಿ ಹತ್ಯೆ

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಮಗನಿಂದಲೇ ತಂದೆ – ತಾಯಿ ಹತ್ಯೆ

0

ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ತಂದೆ ಹಾಗೂ ಮಲತಾಯಿಯನ್ನು ಮಗನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ಅಶೋಕ ಕೊಬ್ಬನ್ನವರ, ಶಾರವ್ವ ಕೊಬನ್ನವರ ಮೃತರು. ಗಂಗಾಧರ ಕೊಬ್ಬನ್ನವರ ಕೊಲೆ ಆರೋಪಿ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಹತ್ಯೆಯದವರ ಮೃತದೇಹಗಳನ್ನು ಕಿಮ್ಸ್​ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕೊಲೆ ಮಾಡಿ ಪರಾರಿ ಆಗಿರುವ ಆರೋಪಿ ಗಂಗಾಧರನ ಪತ್ತೆಗೆ ಪೊಲೀಸರು​ ಶೋಧ ಕಾರ್ಯ ನಡೆಸುತ್ತಿದ್ದಾರೆ.