ಮನೆ ಅಪರಾಧ ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

0

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸೇರಿ ಹಲವು ಗ್ರಾಮಗಳ 100ಕ್ಕೂ ಹೆಚ್ಚು ಕುಟುಂಬಗಳು ಮನೆಗೆ ಬೀಗ ಹಾಕಿ ಗ್ರಾಮ ತೊರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

Join Our Whatsapp Group

ಸಾಲ ಪಡೆದಿರುವ ಕುಟುಂಬಗಳ ಮನೆಗಳ ಮುಂಭಾಗದಲ್ಲಿ ಫಲಕ ಅಳವಡಿಸಿ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಕೆಲವು ಮನೆಗಳಿಗೆ ಬೀಗ ಜಡಿದು ಕುಟುಂಬದವರನ್ನು ಹೊರದಬ್ಬಿರುವ ಘಟನೆಯೂ ನಡೆದಿದೆ ಎನ್ನಲಾಗಿದೆ.

ಗ್ರಾಮಶಕ್ತಿ, ಫೈವ್‌ ಸ್ಟಾರ್‌, ಎಲ್‌ ಆ್ಯಂಡ್‌ ಟಿ, ಬಂಧನ್‌ ಮೈಕ್ರೋ ಫೈನಾನ್ಸ್‌ಗಳು ಆಮಿಷಗಳನ್ನು ಒಡ್ಡಿ ಬಲವಂತವಾಗಿ ಸಾಲ ಕೊಡುವ ಮೈಕ್ರೋ ಫೈನಾನ್ಸ್‌ಗಳು ಅನಂತರ ವಸೂಲಿಗೆ ಅನ್ಯ ಮಾರ್ಗಗಳನ್ನು ಹಿಡಿದು ಕಿರುಕುಳ ನೀಡುತ್ತಿವೆ. ಇದರ ಬಗ್ಗೆ ಸರಕಾರ ಮಧ್ಯ ಪ್ರವೇಶಿಸಿ ಗ್ರಾಮದಿಂದ ಹೋಗಿರುವವರನ್ನು ಮರಳಿ ಕರೆತರಬೇಕೆಂದು ಮುಖಂಡರಾದ ಶಿರಮಲ್ಲಿ ಹುಚ್ಚಯ್ಯ ಆಗ್ರಹಿಸಿದ್ದಾರೆ.