ಮನೆ ಸುದ್ದಿ ಜಾಲ ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

0

ಮೈಸೂರು (Mysuru)- ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಾನಸಗಂಗೋತ್ರಿಯಲ್ಲಿ ಸಸಿ ನೆಟ್ಟು ನೀರೆರೆಯಲಾಯಿತು.
ಮೈಸೂರು ವಿಶ್ವವಿದ್ಯಾನಿಲಯದ ತೋಟಗಾರಿಕಾ ವಿಭಾಗದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರು ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿವಿ ಕುಲಸಚಿವರಾದ ಪ್ರೊ. ಆರ್. ಶಿವಪ್ಪ, ವಿಶೇಷಾಧಿಕಾರಿ ಪ್ರೊ. ಹೆಚ್.ಕೆ. ಚೇತನ, ತೋಟಗಾರಿಕೆ ವಿಭಾಗದ ಸಹಾಯಕ ನಿರ್ದೇಶಕರಾದ ಎಸ್.ಕೆ. ಮುಜಾವರ್ ಮತ್ತಿತರರು ಉಪಸ್ಥಿತರಿದ್ದರು.