ನವದೆಹಲಿ: 2008ರ ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ಹುಸೇನ್ ರಾಣಾ ಗಡೀಪಾರಿಗೆ ಅಮೆರಿಕ ಸುಪ್ರೀಕೋರ್ಟ್ ಒಪ್ಪಿಗೆ ನೀಡಿದೆ.
ಇದು ಭಾರತಕ್ಕೆ ಸಿಕ್ಕ ದೊಡ್ಡ ಜಯವಾಗಿದೆ ಎಂದು ಇದೇ ಪ್ರಕರಣದಲ್ಲಿ ಬಂಧಿಯಾಗಿ ಮರಣದಂಡನೆ ಗುರಿಯಾಗಿದ್ದ ಉಗ್ರ ಅಜ್ಮಲ್ ಕಸಬ್ ವಿರುದ್ಧ ವಾದ ಮಂಡಿಸಿದ್ದ ನ್ಯಾಯವಾದಿ ಉಜ್ವಲ್ ನಿಕಮ್ ಪ್ರತಿಕ್ರಿಯಿಸಿದ್ದಾರೆ.
ರಾಣಾ ಅವರ ರಿಟ್ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಭಾರತಕ್ಕೆ ಸಿಕ್ಕ ದೊಡ್ಡ ಜಯವಾಗಿದೆ. ಯಾಕೆಂದರೆ ರಾಣಾ ಮತ್ತು ಡೇವಿಡ್ ಹೆಡ್ಲಿ ಮುಂಬೈ ಭಯೋತ್ಪಾದಕ ದಾಳಿಯ ಹಿಂದಿರುವ ಪ್ರಮುಖ ರೂವಾರಿಗಳಾಗಿದ್ದಾರೆ’ ಎಂದು ಸುದ್ದಿಸಂಸ್ಥೆ ಎಎನ್‌ಐಗೆ ಹೇಳಿದರು.
ರಾಣಾ ಹಸ್ತಾಂತರವು ಮುಂಬೈ ದಾಳಿಯ ಬಗ್ಗೆ ಹೆಚ್ಚಿನ ಪುರಾವೆಗಳನ್ನು ನೀಡುತ್ತದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದರು.














