ಮನೆ ಸ್ಥಳೀಯ ಇಡಿ ಬಿಡುಗಡೆ ‌ಮಾಡಿರುವುದು ತನಿಖಾ ವರದಿಯಲ್ಲ, ಜಪ್ತಿ ಮಾಹಿತಿಯ ವರದಿಯಷ್ಟೆ: ಸಿದ್ದರಾಮಯ್ಯ

ಇಡಿ ಬಿಡುಗಡೆ ‌ಮಾಡಿರುವುದು ತನಿಖಾ ವರದಿಯಲ್ಲ, ಜಪ್ತಿ ಮಾಹಿತಿಯ ವರದಿಯಷ್ಟೆ: ಸಿದ್ದರಾಮಯ್ಯ

0

ಮೈಸೂರು: ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿಯಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Join Our Whatsapp Group

ಜಿಲ್ಲೆಯ ಸುತ್ತೂರಿನಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಹಣ ಅಕ್ರಮ ವಹಿವಾಟು ಪ್ರಶ್ನೆ ಈ ಪ್ರಕರಣದಲ್ಲಿ ಎಲ್ಲಿ ಬರುತ್ತದೆ? ಎಂದು ಕೇಳಿದರು.

ಮುಡಾ ಮಾಜಿ ಆಯುಕ್ತ ನಟೇಶ್‌ಗೆ ED  ಕೊಟ್ಟಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರರ್ಥ ಕಾನೂನು ಪ್ರಕಾರ ಇಲ್ಲ ಎಂಬುದು ತಾನೆ? ಇಲ್ಲದಿದ್ದರೆ ನ್ಯಾಯಾಲಯವೇಕೆ ತಡೆಯಾಜ್ಞೆ ಕೊಡುತ್ತಿತ್ತು? ಎಂದು ಕೇಳಿದರು.

ನನ್ನ ಹೆಸರು ಕೆಡಿಸಲು ಇಷ್ಟೆಲ್ಲಾ ಪ್ರಯತ್ನಗಳು ನಡೆಯುತ್ತಿವೆ. EDಯು ಗುರುವಾರ ಬಿಡುಗಡೆ ಮಾಡಿರುವುದು ತನಿಖಾ ವರದಿಯಲ್ಲ, ಅದು ಕೇವಲ ಜಪ್ತಿ ವರದಿ. ಇಡಿಯ ತನಿಖೆ ರಾಜಕೀಯ ಪ್ರೇರಿತ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

ನನ್ನ ವಿಚಾರದಲ್ಲಿ ಮಾತನಾಡಲು ಇವರಿಗೆ (ವಿರೋಧ ಪಕ್ಷದವರಿಗೆ) ಏನೂ ಸಿಕ್ಕಿಲ್ಲ. ಹೀಗಾಗಿ ಈ ವಿಚಾರ ಇಟ್ಟುಕೊಂಡು ಹೆಸರಿಗೆ ಮಸಿ ಬಳಿಯುವ ಯತ್ನ ಮಾಡುತ್ತಿದ್ದಾರೆ. ಅದರಲ್ಲಿ ಬಿಜೆಪಿ ಯಶಸ್ವಿ ಅಗುವುದಿಲ್ಲ. ಮುಡಾ ವಿಚಾರದಲ್ಲಿ ನಾನು, ನಮ್ಮ ಕುಟುಂಬದವರು ಯಾವ ತಪ್ಪನ್ನೂ ಮಾಡಿಲ್ಲ ಎಂದರು.

ಸಿಎಂ ಸ್ಥಾನ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಗರಂ ಆದ ಅವರು,  ‘ನನಗೆ ಮತ್ತೆ ಮತ್ತೆ ಅದನ್ನೇ ಕೇಳಬೇಡಿ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದ ಬಗ್ಗೆ ನಾನು ಎಷ್ಟು ಬಾರಿ ಸ್ಪಷ್ಟೀಕರಣ ಕೊಡಲಿ ಹೇಳಿ? ಎಂದರು

ಇಬ್ಬರು, ಮೂವರು ಸಚಿವರು ಜೊತೆಯಲ್ಲಿ ಕುಳಿತು ಮಾತನಾಡಿದ ತಕ್ಷಣ ಚರ್ಚೆ ನಡೆದಿರುವುದು ಇದೇ ವಿಚಾರ ಎಂದು ಯಾಕೆ ಗ್ರಹಿಸುತ್ತೀರಾ? ಊಹಾ ಪತ್ರಿಕೋದ್ಯಮ ಬಿಟ್ಟು ಬಿಡಿ. ಮೂರು ನಾಲ್ಕು ಜನ ಸೇರಿದಾಗ ರಾಜಕೀಯ ಚರ್ಚೆ ಮಾಡುತ್ತೇವೆ. ನನ್ನ ಪ್ರಕಾರ ಡಿನ್ನರ್ ಮೀಟಿಂಗ್ ಅಥವಾ ಸಭೆ ಮಾಡುವುದರಲ್ಲಿ ತಪ್ಪೇ ಇಲ್ಲ. ನೀವು ಅದರಲ್ಲಿ ಹುಡುಕುವ ಗ್ರಹಿಕೆ ಸರಿ ಇಲ್ಲ ಅಷ್ಟೇ ಎಂದರು.

ಕೇಂದ್ರ ಬಜೆಟ್‌ನಿಂದ ನಾನು ಏನನ್ನೂ ನಿರೀಕ್ಷೆ ಮಾಡುವುದಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ದುಡ್ಡು ಕೊಡುತ್ತೇನೆಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆದರೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ. ಹೀಗಾಗಿ ನಾನು ಏನನ್ನೂ ನಿರೀಕ್ಷೆ ಮಾಡುವುದಿಲ್ಲ. ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ‌. ನಾಲ್ಕು ಲಕ್ಷ ಕೋಟಿ ರೂಪಾಯಿ ತೆರಿಗೆ ಕೊಡುತ್ತೇವೆ. ಕೇವಲ ₹ 68ಸಾವಿರ ಕೋಟಿ ತೆರಿಗೆ ನಮಗೆ ಕೊಡುತ್ತಾರೆ. ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ‌. ನಮ್ಮಗೆ ಈ ಬಾರಿಯೂ ಅನ್ಯಾಯ ಮಾಡುತ್ತಾರೆ ಎಂದರು.

ಮೈಕ್ರೊ ಫೈನಾನ್ಸ್ ಸಂಸ್ಥೆಗಳ ವಿಚಾರದ ಬಗ್ಗೆ ಮಾತನಾಡಿದ ಅವರು, ಜನ ಎಲ್ಲಿ ಸಾಲ ಸಿಗುತ್ತದೆಯೋ ಅಲ್ಲಿಗೆ ಹೋಗುತ್ತಿದ್ದಾರೆ. ಹೆಚ್ಚು ಬಡ್ಡಿ ಹಾಕುತ್ತಿದ್ದಾರೆ. ಹೊರಗುತ್ತಿಗೆ ಮೂಲಕ ಗೂಂಡಾಗಳನ್ನು ಬಳಸಿಕೊಂಡ ಹಣ ವಸೂಲಿ ಮಾಡುತ್ತಿದ್ದಾರೆ. ಮೈಕ್ರೊ ಫೈನಾನ್ಸ್‌ಗಳು ಆರ್‌ಬಿಐ ನಿಯಮದಡಿ ಬರುತ್ತದೆ. ಕಡಿವಾಣ ಹಾಕಲು ಇನ್ನೂ ಸುಗ್ರೀವಾಜ್ಞೆ ಹೊರಡಿಸಿಲ್ಲ‌. ಸುಗ್ರೀವಾಜ್ಞೆ ಹೊರಡಿಸಿದ ನಂತರ ಇದಕ್ಕೆ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಶೇ 28, 29, 30ರಷ್ಟು ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ಸಾಲಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಯಾರು ವೀಪರೀತವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದಾರೆಯೋ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಸರ್ಕಾರ ನಮ್ಮ ಪರವಿದೆ ಎಂದು ಹೇಳಿದರು.

ಕುಂಭಮೇಳ ಟೀಕಿಸುವ ಕಾಂಗ್ರೆಸ್‌ನವರು ಆಯೋಗ್ಯರು ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದರು.

ಕುಂಭಮೇಳ ನಡೆಯುತ್ತಿರುವುದು ಎಲ್ಲಿ? ಹಾಗಾದರೆ ಅವರು ಅಯೋಗ್ಯರಾ? ಟೀಕೆ ಮಾಡಬಾರದು ಎಂದರೆ ಏನರ್ಥ? ವಿಜಯೇಂದ್ರ ಹೇಳಿಕೆ ಬಾಲಿಶವಾದುದು ಎಂದರು.