ಮನೆ ಅಪರಾಧ ದಾವಣಗೆರೆ: ಈಜಲು ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

ದಾವಣಗೆರೆ: ಈಜಲು ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

0

ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ ಪಾಂಡು ಹಾಗೂ ಯತೀಂದ್ರ ಮೃತಪಟ್ಟ ಮಕ್ಕಳೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Join Our Whatsapp Group

ಶಾಲೆಗೆ ರಜೆ ಹಿನ್ನೆಲೆ ಈಜಲು ಬಂದಿದ್ದ ಮಕ್ಕಳು: ಮೃತ ಮಕ್ಕಳಿಬ್ಬರು ದೂರದ ತುರ್ಚಘಟ್ಟ ಗ್ರಾಮದ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಸ್ನೇಹಿತರಾಗಿದ್ದು ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಕುರ್ಕಿ ಗ್ರಾಮದ ಮುಖ್ಯ ಕಾಲುವೆಯಲ್ಲಿ ಈಜಲು ಬಂದಿದ್ದರು. ಈ ವೇಳೆ ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.