ಬೆಂಗಳೂರು: ಭಾನುವಾರ ಬೆಂಗಳೂರು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದೇ ರಾಜ್ಯದಲ್ಲಿ ಸಂಚರಿಸುತ್ತಿದ್ದ ಫೆರಾರಿ, ಪೋರ್ಷೆ, ಬಿಎಂಡಬ್ಲೂ, ಬೆಂಜ್, ಔಡಿ, ಔಸ್ಟಿನ್, ರೇಂಜ್ ರೋವರ್ ಸೇರಿದಂತೆ 30 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಸಾರಿಗೆ ಉಪ ಆಯುಕ್ತರಾದ ಸಿ. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾಧ ಬಿ. ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ ಮತ್ತು ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವಶಪಡಿಸಿಕೊಂಡಿರುವ ಕಾರುಗಳಿಂದು ಸುಮಾರು 3 ಕೋಟಿ ರೂಪಾಯಿಗಳ ತೆರಿಗೆಯನ್ನು ವಸೂಲಿಗೆ ನೊಟೀಸ್ ನೀಡಲಾಗಿದೆ.
Saval TV on YouTube