ನವದೆಹಲಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಅತಿಶಿ ವಿರುದ್ಧ ದೆಹಲಿ ಪೊಲೀಸರು ಇಂದು (ಮಂಗಳವಾರ) ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಲ್ಕಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿ ಅತಿಶಿ ವಿರುದ್ಧ ಗೋವಿಂದಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅತಿಶಿ , ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.














