ಮನೆ ರಾಷ್ಟ್ರೀಯ ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಆರಂಭ

ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಆರಂಭ

0

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಜನರು ಹಕ್ಕು ಚಲಾಯಿಸುತ್ತಿದ್ದಾರೆ. ದೆಹಲಿಯಲ್ಲಿ 1.56 ಕೋಟಿ ಮತದಾರರಿದ್ದಾರೆ.

Join Our Whatsapp Group

ಆಮ್ ಆದ್ಮಿ ಪಕ್ಷ (ಎಎಪಿ) ಮೂರನೇ ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲು ಎದುರು ನೋಡುತ್ತಿದೆ. ಇನ್ನೊಂದೆಡೆ ಬಿಜೆಪಿ, ಕಾಂಗ್ರೆಸ್‌ ಕೂಡ ಅಧಿಕಾರಕ್ಕೆ ಬರುವ ಭರವಸೆಯಲ್ಲಿದೆ.

70 ವಿಧಾನಸಭಾ ಕ್ಷೇತ್ರದ 13,766 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, 699 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಶಾಂತಿಯುತ ಮತದಾನ ಮತ್ತು ಭದ್ರತೆಗಾಗಿ 200 ಅರೆಸೇನೆ ಪಡೆ, 35,626 ದೆಹಲಿ ಪೊಲೀಸ್‌ ಸಿಬ್ಬಂದಿ, 19 ಸಾವಿರ ಹೋಮ್‌ಗಾರ್ಡ್‌ಗಳನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.

ಸುಮಾರು 3 ಸಾವಿರ ಮತಗಟ್ಟೆಗಳನ್ನು ಸೂಕ್ಷ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಆ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

ಮತ ಎಣಿಕೆ ಫೆ.8ರಂದು ನಡೆಯಲಿದೆ.