ಮನೆ ಅಪರಾಧ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

0

ಹಾರೋಹಳ್ಳಿ: ಪಟ್ಟಣದ ಹೊರವಲಯದ ಕನಕಪುರ ರಸ್ತೆಯಲ್ಲಿರುವ ಡಾ. ಚಂದ್ರಮ್ಮ ದಯಾನಂದ ಸಾಗರ್ ಇನ್‌ಸ್ಟಿಟ್ಯೂಟರ್ ಆಫ್ ಮೆಡಿಕಲ್ ಎಜುಕೇಷನ್ ಆ್ಯಂಡ್ ರಿಸರ್ಜ್ (ಸಿಡಿಎಸ್‌ಐಎಂಇಆರ್) ಕಾಲೇಜಿನಲ್ಲಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Join Our Whatsapp Group

ಕಣ್ಣೂರಿನ  ವಿನುತಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ರಾತ್ರಿ 8 ಗಂಟೆ ಸುಮಾರಿಗೆ  ವಿನುತಾ ತಮ್ಮ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಾರೋಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.