ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ಗಳಿ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದ ಎರಡು ಬೈಕ್ ಗಳಿಗೆ ಸಾರಿಗೆ ಬಸ್ ಗುದ್ದಿದೆ. ಪರಿಣಾಮ ಬೈಕ್ನಲ್ಲಿದ್ದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರ ವಿವರ ಇನ್ನೂ ತಿಳಿದು ಬಂದಿಲ್ಲ.














