ಮನೆ ಸುದ್ದಿ ಜಾಲ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ.ಬಿ.ಎಸ್.ಮಂಜುನಾಥಸ್ವಾಮಿ

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ.ಬಿ.ಎಸ್.ಮಂಜುನಾಥಸ್ವಾಮಿ

0

ಮೈಸೂರು (Mysuru): ಸಾರ್ವಜನಿಕರಿಗೆ ಬಾಲ ಕಾರ್ಮಿಕರ ಸ್ಥಿತಿಯ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ ಮೂಲಕ ಹಾಗೂ ಬೀದಿ ನಾಟಕಗಳ ಪ್ರದರ್ಶನ ಮಾಡುವ ಮೂಲಕ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್.ಮಂಜುನಾಥಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಾಲ ಕಾರ್ಮಿಕ ಪದ್ದತಿಯ ನಿಷೇದದ ಬಗ್ಗೆ ಅರಿವು ಮೂಡಿಸಿ. ಬಾಲ ಕಾರ್ಮಿಕರನ್ನು ಶಾಲೆಗಳಿಗೆ ಮರಳುವಂತೆ ಅಗತ್ಯ ಕ್ರಮ ಕೈಗೊಳ್ಳಿ. ಬಾಲ ಕಾರ್ಮಿಕರು ಕಂಡುಬಂದರೆ ಸಾರ್ವಜನಿಕರು ಮಕ್ಕಳ ಸಹಾಯವಾಣಿ 1098 ಕರೆ ಮಾಡುವ ಮಾಹಿತಿ ನೀಡಿ ಎಂದು ತಿಳಿಸಿದರು.

ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಾದ ನಜೀಯ ಸುಲ್ತಾನ್, ಕಾರ್ಮಿಕ ಅಧಿಕಾರಿಯಾದ ರಾಜೇಶ್ ಜಾಧವ್, ಯೋಜನಾ ನಿರ್ದೇಶಕರಾದ ಹೆಚ್. ಪಿ. ಮಲ್ಲಿಕಾರ್ಜುನ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಜಯಣ್ಣ, ಶಶಿಧರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.