ಮನೆ ರಾಷ್ಟ್ರೀಯ ಪ್ಯಾರಾ ಶೂಟಿಂಗ್ ವಿಶ್ವಕಪ್‌: ಚಿನ್ನ ಗೆದ್ದ ಅವನಿ ಲೇಖರಾ, ಶ್ರೀಹರ್ಷ ದೇವರ್ಡಿ ಅವರನ್ನು ಅಭಿನಂದಿಸಿದ ಪ್ರಧಾನಿ...

ಪ್ಯಾರಾ ಶೂಟಿಂಗ್ ವಿಶ್ವಕಪ್‌: ಚಿನ್ನ ಗೆದ್ದ ಅವನಿ ಲೇಖರಾ, ಶ್ರೀಹರ್ಷ ದೇವರ್ಡಿ ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ

0

ನವದೆಹಲಿ (New Delhi): ಪ್ಯಾರಾ ಶೂಟಿಂಗ್ ವಿಶ್ವಕಪ್‌ ನಲ್ಲಿ ಚಿನ್ನ ಗೆದ್ದ ಭಾರತದ ಅವನಿ ಲೇಖರಾ, ಶ್ರೀಹರ್ಷ ದೇವರ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಐತಿಹಾಸಿಕ ಸಾಧನೆಗಾಗಿ ಅವ್ನಿ ಲಖೇರಾ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ನೀವು ಯಶಸ್ಸಿನ ಹೊಸ ಎತ್ತರವನ್ನು ತಲುಪುತ್ತೀರಿ ಮತ್ತು ಇತರರಿಗೆ ಸ್ಫೂರ್ತಿ ನೀಡುತ್ತಿರಿ. ನಿಮಗೆ ಶುಭವಾಗಲಿ.

ಮತ್ತೊಂದು ಟ್ವೀಟ್ ನಲ್ಲಿ ಮೋದಿ, ಶ್ರೀಹರ್ಷ ದೇವರ್ಡಿ ಚಿನ್ನ ಗೆದ್ದಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಅವರ ಸಂಕಲ್ಪ ನಿಜಕ್ಕೂ ಸ್ಪೂರ್ತಿದಾಯಕ. ಆಕೆಯ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು. ಚಿನ್ನದ ಪದಕ ತಂದಿರುವುದಕ್ಕೆ ಹೆಮ್ಮೆ ಎಂದಿದ್ದಾರೆ. 

ಫ್ರಾನ್ಸ್ ನ ಚಟಿರಾಕ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವಕಪ್ ನ ವನಿತೆಯ 10 ಮೀ. ಏರ್ ರೈಫಲ್ ಸ್ಟಾಂಡಿಂಗ್ ಎಸ್ಎಚ್ 1ರಲ್ಲಿ ಟೋಕಿಯೊ ಪ್ಯಾರಾಲಿಂಪಿಕ್ಸ್ ನ ಚಾಂಪಿಯನ್ ಅವನಿ ಲೇಖರಾ ಅವರು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. 

ಪ್ಯಾರಾ ಶೂಟಿಂಗ್ ವಿಶ್ವಕಪ್‌ನಲ್ಲಿ 250.6 ರ ವಿಶ್ವ ದಾಖಲೆಯೊಂದಿಗೆ ಚಿನ್ನದ ಪದಕ ಗೆಲ್ಲುವ ಮೂಲಕ 20 ವರ್ಷದ ಲಖೇರಾ ಅವರು 2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅರ್ಹತೆ ಗಳಿಸಿಕೊಂಡರು.  

ಪ್ಯಾರಾ ಶೂಟಿಂಗ್ ವಿಶ್ವಕಪ್ ಮಿಶ್ರ 10 ಮೀ. ಏರ್ ರೈಫಲ್ ಸ್ಟಾಡಿಂಗ್ ಎಸ್ಎಚ್2ನಲ್ಲಿ 253.1 ಅಂಕದೊಂದಿಗೆ ಶ್ರೀಹರ್ಷ ದೇವರ್ಡಿ ಚಿನ್ನದ ಪದಕ ಗೆದ್ದಿದ್ದಾರೆ.