ಚಿಕ್ಕಮಗಳೂರು: ಟ್ರ್ಯಾಕ್ಟರ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಕೊಪ್ಪ ತಾಲೂಕಿನ ತೀರ್ಥಕೆರೆ ಬಳಿ ನಡೆದಿದೆ.
ಅಸ್ಸಾಂ ಸೇರಿದಂತೆ ಸ್ಥಳೀಯ 40 ಕಾರ್ಮಿಕರು ತೀರ್ಥಕೆರೆ ಸಮೀಪದ ಎಸ್ಟೇಟ್‌ನಲ್ಲಿ ಕೆಲಸ ಮುಗಿಸಿಕೊಂಡು, ಜಯಪುರ ಪಟ್ಟಣದಲ್ಲಿ ದಿನಸಿ ಖರೀದಿಸಿಕೊಂಡು ಟ್ರ್ಯಾಕ್ಟರ್ನಲ್ಲಿ ವಾಪಸ್ ತೀರ್ಥಕೆರೆ ಗ್ರಾಮಕ್ಕೆ ತೆರಳುತ್ತಿದ್ದರು. ದಾರಿ ಮಧ್ಯೆ ತೀರ್ಥಕೆರೆ ಬಳಿಯೇ ಚಾಲಕನ ನಿಯಂತ್ರಣ ತಪ್ಪಿ ಟ್ಯಾಕ್ಟರ್ 20 ಅಡಿ ಆಳಕ್ಕೆ ಬಿದ್ದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಜಯಪುರ ಮತ್ತು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














