ಮನೆ ರಾಜ್ಯ ರಾಜ್ಯದಲ್ಲಿ 376 ಮಂದಿಗೆ ಕೋವಿಡ್‌ ಸೋಂಕು

ರಾಜ್ಯದಲ್ಲಿ 376 ಮಂದಿಗೆ ಕೋವಿಡ್‌ ಸೋಂಕು

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 376 ಮಂದಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 39,54,313 ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 40,066 ಇದೆ.

231 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದು, ಗುಣಮುಖರಾದವರ ಸಂಖ್ಯೆ 39,11,582 ಕ್ಕೆ ತಲುಪಿದೆ. ರಾಜ್ಯದಲ್ಲಿ ಸದ್ಯ 2,623 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲೇ 358 ಮಂದಿಗೆ ಕೋವಿಡ್‌ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರದಲ್ಲಿ 3, ಮೈಸೂರಿನಲ್ಲಿ 7, ಧಾರವಾಡದಲ್ಲಿ 4, ಹಾವೇರಿಯಲ್ಲಿ 2, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಒಂದು ಪ್ರಕರಣಗಳು ವರದಿಯಾಗಿವೆ. ಉಳಿದೆಡೆ ಶೂನ್ಯ ಪ್ರಕರಣವಿದೆ.

ಮೈಸೂರಿನಲ್ಲಿ 7 ಮಂದಿಗೆ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆ 2,29,592 ತಲುಪಿದೆ. ಒಬ್ಬರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದು, ಗುಣಮುಖರಾದವರ ಸಂಖ್ಯೆ 2,27,017 ತಲುಪಿದೆ. 16 ಸಕ್ರಿಯ ಪ್ರಕರಣಗಳಿವೆ. ಮೈಸೂರಿನಲ್ಲಿ ಇದುವರೆಗೆ 2,559 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.