ಮನೆ ಅಪರಾಧ ಬಾಗಪ್ಪ ಹರಿಜನ​ ಕೊಲೆ ಕೇಸ್​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ

ಬಾಗಪ್ಪ ಹರಿಜನ​ ಕೊಲೆ ಕೇಸ್​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ

0

ವಿಜಯಪುರ: ಭೀಮಾತೀರದ ನಟೋರಿಯಸ್​ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ವಿಜಯಪುರಪೊಲೀಸರು ಬೇಧಿಸಿದ್ದಾರೆ.

Join Our Whatsapp Group

ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್​ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಎ1 ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್​ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬಾಗಪ್ಪ ಹರಿಜನ​ ಕೊಲೆ

ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ಮಾಡಲಾಗಿತ್ತು. ಆಟೋದಲ್ಲಿ ಬಂದಿದ್ದ ನಾಲ್ಕೈದು ಮಂದಿ, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಮತ್ತು ಗುಂಡು ಹಾರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು. ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿದ್ದರು.

ಕೊಲೆಯಾಗಿರುವ ವಕೀಲ ರವಿ ಸಹೋದರ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಮತ್ತು ಸಹಚರರಿಂದ ಕೃತ್ಯ ಎಸಗಲಾಗಿದೆ ಎಂದು ಬಾಗಪ್ಪ ಪುತ್ರಿ ಗಂಗೂಬಾಯಿ ಗಾಂಧಿಚೌಕ ಠಾಣೆಗೆ ದೂರು ನೀಡಿದ್ದರು.