ಮನೆ ಅಪರಾಧ ಬಸ್ -ಬೊಲೆರೊ ಮುಖಾಮುಖಿ ಡಿಕ್ಕಿ: 10 ಜನ ಭಕ್ತರು ಸ್ಥಳದಲ್ಲೇ ಸಾವು

ಬಸ್ -ಬೊಲೆರೊ ಮುಖಾಮುಖಿ ಡಿಕ್ಕಿ: 10 ಜನ ಭಕ್ತರು ಸ್ಥಳದಲ್ಲೇ ಸಾವು

0

ಪ್ರಯಾಗ್‌ರಾಜ್‌: ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ ಹಾಗೂ ಬೊಲೆರೊ ವಾಹನ ಮುಖಾಮುಖಿ ಡಿಕ್ಕಿಯಾಗಿ 10 ಜನ ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ-ಪ್ರಯಾಗರಾಜ್ ಹೆದ್ದಾರಿಯಲ್ಲಿ ನಡೆದಿದೆ.

Join Our Whatsapp Group

ಬೊಲೆರೊ ವಾಹನದಲ್ಲಿದ್ದ 10 ಜನ ಸ್ಥಳದಲ್ಲೇ ಮೃತಪಟ್ಟಿದ್ದರೆ, 19 ಜನ ಗಾಯಗೊಂಡಿದ್ದಾರೆ. ಮೃತರು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಮೂಲದವರು ಎಂದು ತಿಳಿದುಬಂದಿದ್ದು, ಇವರು ಕುಂಭಮೇಳಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಇನ್ನು ಈ ದುರ್ಘಟನೆ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದುಕೊಂಡಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.