ಮೈಸೂರು: ಪರಿಶಿಷ್ಟ ಪಂಗಡಗಳ ಜನರು ಹೆಚ್ಚಾಗಿ ಇರುವ ಹಾಡಿಗಳ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಈ ಯೋಜನೆಗಳ ಸೌಲಭ್ಯಗಳು ಹಾಗೂ ಕಾಮಗಾರಿಗಳ ಪ್ರಗತಿ ಶೇಕಡಾ 100 ರಷ್ಟು ಆಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಬುಡಕಟ್ಟು ಹಾಡಿಗಳಲ್ಲಿ ಪಿಎಂ ಜನ ಮನ್ ಕಾರ್ಯಕ್ರಮ ಅನುಷ್ಠಾನ, ಪರಿಶಿಷ್ಟ ಹಾಡಿಗಳಲ್ಲಿ ಇರುವ ಸಮಸ್ಯೆಗಳ ಕುರಿತು ಮತ್ತು ಅರಣ್ಯ ಹಕ್ಕುಗಳ ಕಾಯ್ದೆ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಿಎಂ ಜನ್ ಮನ್ ಯೋಜನೆಯಡಿ ಹಾಡಿ ಪ್ರದೇಶಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಶೇಕಡಾ 100 ರಷ್ಟು ಆಗಬೇಕು. ವಿವಿಧ ಇಲಾಖೆಗಳಿಗೆ ಪರಿಶಿಷ್ಟ ಪಂಗಡದ ಹಾಡಿ ಜನರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಅಗತ್ಯವಿರುವ ಸೈಟ್ ಗಳನ್ನು ನೀಡಲಾಗಿದ್ದು, ಕಾಮಗಾರಿಗಳ ಸಂಬಂಧ ಟೆಂಡರ್ ಗಳನ್ನು ಕರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾಡಿ ಜನರಿಗೆ ಭೂಮಿ ನೀಡುವ ಸಂಬಂಧ ಗ್ರಾಮ ಸಭೆಯಲ್ಲಿ ಇಟ್ಟು ಅನುಮೋದನೆ ಪಡೆಯಬೇಕು. 18 ಹಾಡಿಗಳಿಗೆ ಫಾರಂ ಎ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.














