ಮನೆ ಅಪರಾಧ ಕಾಲೇಜು ಬಸ್ ಢಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್: 20 ಕ್ಕೂ ಹೆಚ್ಚು ಮಂದಿಗೆ...

ಕಾಲೇಜು ಬಸ್ ಢಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್: 20 ಕ್ಕೂ ಹೆಚ್ಚು ಮಂದಿಗೆ ಗಾಯ

0

ಬೆಳಗಾವಿ(Belagavi): ಕಾಲೇಜ್ ಬಸ್ ಗೆ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮೂಡಲಗಿ ತಾಲ್ಲೂಕಿನ ಗುರ್ಲಾಪೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಜತ್ತ-ಜಾಂಬೋಟಿ ಹೆದ್ದಾರಿ ಸಮೀಪದ ಗುರ್ಲಾಪುರ ಗ್ರಾಮದ ಬಳಿ ಕೆಎಸ್‍ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮೂಡಲಗಿ ಪಟ್ಟಣದ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಾಲೇಜು ಬಸ್ಸನ್ನು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ನಿಲ್ಲಿಸಿದಾಗ ಈ ಅವಘಡ ಸಂಭವಿಸಿದೆ.

ಕಾಲೇಜು ಬಸ್​ಗೆ ಕೆಎಸ್‌ಆರ್‌ಟಿ ಬಸ್ ಡಿಕ್ಕಿಈ ವೇಳೆ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆ ಬಸ್ಸು ಹಿಂಬದಿಗೆ ಗುದ್ದಿದ ಪರಿಣಾಮ ಕಾಲೇಜ್​ ಬಸ್ಸಿನಲ್ಲಿದ್ದ 10 ಹಾಗೂ ಸರ್ಕಾರಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಡಲಗಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.