ಮನೆ ರಾಜಕೀಯ ಆತ್ಮಸಾಕ್ಷಿಯ ಮತವನ್ನು ಮನ್ಸೂರ್ ಅಲಿಖಾನ್ ಗೆ ಚಲಾಯಿಸಿ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ಆತ್ಮಸಾಕ್ಷಿಯ ಮತವನ್ನು ಮನ್ಸೂರ್ ಅಲಿಖಾನ್ ಗೆ ಚಲಾಯಿಸಿ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ

0

ಬೆಂಗಳೂರು(Bengaluru): ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕರು ತಮ್ಮ ಆತ್ಮಸಾಕ್ಷಿಯ ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕು ಎಂದು ವಿಪಕ್ಷ ನಾಯಕ  ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಜೆಡಿಎಸ್‌ ಶಾಸಕರನ್ನು ಉದ್ದೇಶಿಸಿ ಗುರುವಾರ ಬಹಿರಂಗ ಪತ್ರ ಬರೆದಿರುವ ಅವರು, ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ.

ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜೆಡಿಎಸ್‌ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ ಎಂದಿದ್ದಾರೆ.