ಮನೆ ಅಂತಾರಾಷ್ಟ್ರೀಯ 6 ಮಂದಿ ಭಯೋತ್ಪಾದಕರನ್ನು ಹತ್ಯೆಗೈದ ಪಾಕಿಸ್ತಾನ ಭದ್ರತಾ ಪಡೆ

6 ಮಂದಿ ಭಯೋತ್ಪಾದಕರನ್ನು ಹತ್ಯೆಗೈದ ಪಾಕಿಸ್ತಾನ ಭದ್ರತಾ ಪಡೆ

0

ಪೇಶಾವರ: ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಕಾರ್ಯಾಚರಣೆ ನಡೆಸಿದ ಪಾಕಿಸ್ತಾನ ಭದ್ರತಾ ಪಡೆಗಳು ಕನಿಷ್ಠ 6 ಮಂದಿ ಭಯೋತ್ಪಾದಕರನ್ನು ಹತ್ಯೆಗೈದಿವೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ತಿಳಿಸಿದೆ.

Join Our Whatsapp Group

ಗುಪ್ತಚರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಯಿತು ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ. 

ದೇಶದಲ್ಲಿ ಭಯೋತ್ಪಾದನೆಯ ಬೇರನ್ನು ಕಿತ್ತು ಹಾಕಲು ಭದ್ರತಾ ಪಡೆಗಳು ಬದ್ಧವಾಗಿವೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಐಎಸ್‌ಪಿಆರ್ ತಿಳಿಸಿದೆ.

ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಫಾರ್ ಕಾನ್ಫ್ಲಿಕ್ಟ್ ಅಂಡ್ ಸೆಕ್ಯುರಿಟಿ ಸ್ಟಡೀಸ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, 2025ರ ಜನವರಿಯಲ್ಲಿ ದೇಶದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಗಳ ಸಂಖ್ಯೆ ತೀವ್ರ ಹೆಚ್ಚಳವಾಗಿದೆ. ಹಿಂದಿನ ತಿಂಗಳಿಗೆ(2024ರ ಡಿಸೆಂಬರ್‌) ಹೋಲಿಸಿದರೆ ಶೇ 42ರಷ್ಟು ಹೆಚ್ಚಾಗಿದೆ.

ದೇಶದಾದ್ಯಂತ ಕನಿಷ್ಠ 74 ಭಯೋತ್ಪಾದಕ ದಾಳಿಗಳು ನಡೆದಿದ್ದು, 35 ಭದ್ರತಾ ಸಿಬ್ಬಂದಿ, 20 ನಾಗರಿಕರು ಮತ್ತು 36 ಉಗ್ರಗಾಮಿಗಳು ಸೇರಿದಂತೆ 91 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 53 ಮಂದಿ ಭದ್ರತಾ ಪಡೆ ಸಿಬ್ಬಂದಿ, 54 ನಾಗರಿಕರು ಮತ್ತು 10 ಉಗ್ರರು ಸೇರಿದಂತೆ 117 ಜನ ಗಾಯಗೊಂಡಿದ್ದಾರೆ.

ಭಯೋತ್ಪಾದಕ ದಾಳಿಯಲ್ಲಿ ಖೈಬರ್ ಪಖ್ತುಂಖ್ವಾ ಪ್ರಾಂತ್ಯವು ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿದೆ. ನಂತರದ ಸ್ಥಾನದಲ್ಲಿ ಬಲೂಚಿಸ್ತಾನ ಇದೆ.