ಮನೆ ರಾಜ್ಯ ರಾಜ್ಯದಲ್ಲಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ: ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ: ಸಚಿವ ಮಧು ಬಂಗಾರಪ್ಪ

0

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Join Our Whatsapp Group

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ.  ಅತಿಥಿ ಶಿಕ್ಷಕರ ಸಂಬಳವನ್ನು ನಿಲ್ಲಿಸಿಲ್ಲ.  ಕೆಲ ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿತ್ತು.  ನಿನ್ನೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಗಿದೆ ಎಂದರು.

ಹಿಜಾಬ್ ಧರಿಸಿ ಬರುವವರಿಗೆ ದ್ವಿತೀಯ ಪಿಯು ಪರೀಕ್ಷೆಗೆ ಅನುಮತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ,  ಸದ್ಯ ಹಿಜಾಬ್ ಪ್ರಕರಣ ಕೋರ್ಟ್ ನಲ್ಲಿದೆ ಹೀಗಾಗಿ  ಹಿಜಾಬ್ ಬಗ್ಗೆ ಯಾವುದೇ ಚರ್ಚೆ ಮಾಡುವುದು ಬೇಡ. ಮೊದಲಿನಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತದೆ.  ಈ ಬಾರಿ ಎಸ್ ಎಸ್ ಎಲ್ ಪರಿಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ತಿಳಿಸಿದರು.