ಮನೆ ಅಪರಾಧ ಗ್ಯಾಸ್ ಸ್ಫೋಟ: ಮೂವರಿಗೆ ಗಂಭೀರ ಗಾಯ

ಗ್ಯಾಸ್ ಸ್ಫೋಟ: ಮೂವರಿಗೆ ಗಂಭೀರ ಗಾಯ

0

ಹುಬ್ಬಳ್ಳಿ: ಮನೆಯಲ್ಲಿದ್ದ ಸಿಲಿಂಡ‌ರ್ ಗ್ಯಾಸ್ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿ ಸ್ಫೋಟಗೊಂಡ ಪರಿಣಾಮ ರಾಜಸ್ಥಾನ ಮೂಲದ ಮೂರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಗೋಕುಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಬಳಿ ನಡೆದಿದೆ.

Join Our Whatsapp Group

ತಾರಿಹಾಳ ತೋಟದ ಮನೆಯೊಂದರಲ್ಲಿ ಅಡುಗೆ ಮಾಡಲು ಹೋದ ಸಂದರ್ಭದಲ್ಲಿ ಏಕಾಏಕಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಪರಿಣಾಮ ಮಲಗಿದ್ದ ಇಬ್ಬರು ಕಾರ್ಮಿಕರು ಹಾಗೂ ಅಡುಗೆ ಮಾಡಲು ಹೋಗಿದ್ದ ಓರ್ವ ಕಾರ್ಮಿಕ ಸೇರಿ ಒಟ್ಟು ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಹುಬ್ಬಳ್ಳಿಯ ಕೆಎಂಸಿ‌ಆರ್​​ ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಾಯಾಳುಗಳನ್ನು ರಾಜಸ್ಥಾನ ಮೂಲದ ಸುಭಾಸ್, ಅಶೋಕ್‌, ಮಾಂಗಿಲಾಲ್ ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಓಂ ಸಾಯಿ ಗ್ಯಾಸ್ ಏಜನ್ಸಿಯಲ್ಲಿ ಡಿಲೆವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ.

ಸದ್ಯ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರ ಪೊಲೀಸ್ ಕಮಿಷನ‌ರ್ ಶಶಿಕುಮಾ‌ರ್ ಹಾಗೂ ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಶಿವಪ್ರಕಾಶ್ ಅವರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಕಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.