ಮನೆ ಉದ್ಯೋಗ ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ವಿಜಯನಗರ(Vijaynagara): ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಂದಿನಿಂದ (ಜೂನ್ 9) ಈ ಹುದ್ದೆಗಳು ಭರ್ತಿಯಾಗುವವರೆಗೂ ಕಚೇರಿಗೆ ಹಾಜರಾಗಿ ದಾಖಲೆ, ಅರ್ಜಿ ಸಲ್ಲಿಸಬಹುದಾಗಿದೆ.

ತಜ್ಞ ವೈದ್ಯರು/ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಡಿಎಮ್ಎಫ್ ಅನುದಾನದಡಿ 6 ತಿಂಗಳ ಅವಧಿಗೆ ಮಾತ್ರ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ.

ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳ ಸಂಖ್ಯೆ 1.

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವವರು ಎಂ. ಬಿ. ಬಿ. ಎಸ್ ಪದವಿ ಪಡೆದಿರಬೇಕು. ಕರ್ನಾಟಕ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯಾದ ಚಾಲ್ತಿ ಪ್ರಮಾಣ ಪತ್ರ ಹೊಂದಿರಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 45 ಸಾವಿರ ರೂಪಾಯಿಗಳು.

ಹುದ್ದೆಗಳು:

ಸ್ತ್ರೀರೋಗ ತಜ್ಞರು 8 ಹುದ್ದೆ, ಅರವಳಿಕೆ ತಜ್ಞರು 10 ಹುದ್ದೆ, ಮಕ್ಕಳ ತಜ್ಞರು 6 ಹುದ್ದೆ, ಜನರಲ್ ಫಿಜಿಷಿಯನ್ 2ಹುದ್ದೆ, ರೇಡಿಯೊಲಾಜಿಸ್ಟ್ 1 ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಎಲ್ಲಾ ಹುದ್ದೆಗಳಿಗೆ ತಜ್ಞತೆಗೆ ಅನುಗುಣವಾದ ಎಲ್ಲಾ ದಾಖಲಾತಿಗಳು ಅಗತ್ಯ/ ಕರ್ನಾಟಕ ವೈದ್ಯಕೀಯ ಮಂಡಳಿಯಲ್ಲಿ ನೋಂದಣಿಯಾದ ಚಾಲ್ತಿ ಪ್ರಮಾಣ ಪತ್ರ ಹೊಂದಿರಬೇಕು. ಅಭ್ಯರ್ಥಿಗಳಿಗೆ ವೇತನ1 ಲಕ್ಷದ 30ಸಾವಿರ ರೂ. ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳಿಗೆ ಸೂಚನೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 63 ವರ್ಷದೊಳಗೆ ಇರತಕ್ಕದ್ದು. ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು. ಸದರಿ ಹುದ್ದೆಗೆ ನೇಮಕಾತಿಗೊಳ್ಳುವ ತಜ್ಞ ವೈದ್ಯರು ಆರೋಗ್ಯವಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲು ಅರ್ಹರಿರಬೇಕು.

ಒಂದು ದಿನಕ್ಕೆ ಆ ಹುದ್ದೆಗೆ ಒಂದಕ್ಕಿಂತ ಹೆಚ್ಚಾಗಿ ಅರ್ಜಿಗಳು ಬಂದಲ್ಲಿ ಅಂತಹ ಅರ್ಜಿಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ವರ್ಷ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ 5 ಕೃಪಾಂಕ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19ನಲ್ಲಿ ಸೇವೆ ಸಲ್ಲಿಸಿದವರಿಗೆ ಒಂದು ವರ್ಷಕ್ಕೆ 10 ಕೃಪಾಂಕ ನೀಡಿ ಮೆರಿಟ್ ಅಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ತಜ್ಞತೆಯ ವಿದ್ಯಾರ್ಹತೆಯ ಅನುಗುಣವಾಗಿ ಮೂಲ ದಾಖಲಾತಿ ಸಮೇತ ಒಂದು ನಕಲು ಪ್ರತಿಯ ಜೊತೆಗೆ ಜಿಲ್ಲಾಧಿಕಾರಿಗಳ ಕಚೇರಿ ಹೊಸಪೇಟೆ ವಿಜಯನಗರ ಜಿಲ್ಲೆ ಇಲ್ಲಿಗೆ ಜೂನ್ 9 ರಿಂದ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಭರ್ತಿಯಾಗುವವರೆಗೂ ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಹಾಜರಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.