ನವದೆಹಲಿ: ಮಹಿಳೆಯರಿಗೆ ಮಾಸಿಕ ₹2,500 ನೆರವು ಯೋಜನೆಯ ನೋಂದಣಿ ಪ್ರಕ್ರಿಯೆ ಮಾರ್ಚ್ 8ರಿಂದ ಪ್ರಾರಂಭವಾಗಲಿದೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ‘ಎನ್ಡಿಟಿವಿ’ ವರದಿ ಮಾಡಿದೆ.
ದೆಹಲಿ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ ಮಹಿಳಾ ಸಮೃದ್ಧಿ ಯೋಜನೆಯಡಿ ತಿಂಗಳಿಗೆ ₹2,500 ನೀಡುವುದಾಗಿ ಭರವಸೆ ನೀಡಿತ್ತು.
ಮಾಧ್ಯಮಗಳೊಂದಿಗೆ ಮಾತನಾಡಿದ ತಿವಾರಿ, ಮಾರ್ಚ್ 8ರಿಂದ ಮಹಿಳೆಯರಿಗೆ ₹2,500 ನೆರವು ನೀಡುವ ಯೋಜನೆಗೆ ನೋಂದಣಿ ಪ್ರಾರಂಭಿಸುತ್ತಿದ್ದೇವೆ. ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.














