ಬೆಂಗಳೂರು: ವಿದ್ಯುತ್ ಮೀಟರ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ ಎಂದು ಟೀಕಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಅದಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಹಾಲು ಸ್ಟ್ಯಾಂಪ್ ಡ್ಯೂಟಿ ವಿದ್ಯತ್ ಮೀಟರ್ ಬೆಲೆ ಏರಿಕೆ ಮಾಡಿದೆ. ಇದರಿಂದ ಜನಸಾಮನ್ಯಾರಿಗೆ ಹೊರೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರ ಕಳೆದ 20 ತಿಂಗಳಿನಿಂದ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಕಾಂಗ್ರೆಸ್ ನವರಿಗೆ ಶಾಸಕರಿಗೆ ಅನುದಾನ ಕೊಡಲು ಸಾಧ್ಯವಾಗಿಲ್ಲ. ಎಸ್ ಸಿ, ಎಸ್ ಟಿಯವರಿಗೆ ಟೆಂಡರ್ ಗೆ ಮೀಸಲಾತಿ ಕೊಟ್ಟಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್ ಕರೆದಿದ್ದಾರೆ ಈ ನಡುವೆ ಮುಸ್ಲೀಮರಿಗೆ ಶೇ.4 ಮೀಸಲಾತಿ ಕೊಡಲು ಮುಂದಾಗಿದ್ದಾರೆ ಎಂದು ಹರಿಹಾಯ್ದರು.














