ಚಿಕ್ಕೋಡಿ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚಲಿ ಪಟ್ಟಣದಲ್ಲಿ ಇಂದು ಮುಂಜಾನೆ ನಡೆದಿದೆ.
ಮೃತರನ್ನು ಶಾರದಾ ಢಾಲೆ (38) ಹಾಗೂ 8, 10 ಮತ್ತು, 14 ವರ್ಷ ವಯಸ್ಸಿನ ಮಕ್ಕಳು ಎಂದು ಗುರುತಿಸಲಾಗಿದೆ.
ದಿನನಿತ್ಯ ಗಂಡ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂವರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಗಂಡ ಅಶೋಕ್ ಢಾಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













