ಮನೆ ಅಪರಾಧ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ

0

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾಡುಗೋಡಿಯ ದೊಡ್ಡಬನಹಳ್ಳಿಯಲ್ಲಿ ವಾಸವಾಗಿದ್ದ ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ದಾಖಲೆ ಪಡೆದಿದ್ದ ಬಾಂಗ್ಲಾದೇಶದ ಮೊಹಮ್ಮದ್ ಸಿದ್ಧಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮಬಂಗಾಳದ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ಪಾಸ್ ಪೋರ್ಟ್, ವೋಟರ್ ಐಡಿ, ಪಾನ್ ಕಾರ್ಡ್ ಪಡೆದಿದ್ದ ಸಿದ್ದಿಕ್ ನನ್ನು ಇದೀಗ ಕಾಡಗೋಡಿಯ ಪೊಲೀಸರು ಎಫ್ ಐಆರ್ ದಾಖಲಿಸಿ ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.