ಮನೆ ಅಪರಾಧ ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ನಾಲ್ವರಿಗೆ ಗಾಯ

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ನಾಲ್ವರಿಗೆ ಗಾಯ

0

ಬೆಂಗಳೂರು : ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರಿನ ರಾಜಕುಮಾರ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಡಿವೈಡರ್ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ನಾಲ್ವರಿಗೆ ಗಾಯಗಳಾಗಿವೆ. ದಿಕ್ಕಿಯ ರಭಸಕ್ಕೆ 20 ಮೀಟರ್ ನಷ್ಟು ಕಾರು ಬಿದ್ದಿದೆ.

ಕೂಡಲೇ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ಅವರನ್ನು ದಾಖಲಿಸಿ ನೀಡಲಾಗುತ್ತಿದೆ ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.