ಮಂಡ್ಯ : ಪ್ರೀತಿಸಿ ನಾಟಕವಾಡಿ ಬಳಿಕ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವಕನೊಬ್ಬ ಯುವತಿಗೆ ವಂಚನೆ ಎಸಗಿದ್ದ. ಇದರಿಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಬಳಿಕ ಪುತ್ರಿಯ ಸಾವಿನಿಂದ ನೊಂದ ತಾಯೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಂಡ್ಯದಲ್ಲಿ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಿಯಕರ ಹರಿಕೃಷ್ಣ ಸೇರಿದಂತೆ 19 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಹರಿಕೃಷ್ಣ ಸೇರಿ 19 ಆರೋಪಿಗಳ ವಿರುದ್ಧ FIR ದಾಖಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS ಸೆಕ್ಷನ್ 191,194, 64, 108, 54 118ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯನ್ನು ಪ್ರೀತಿಸಿ ಪಕ್ಕದ ಊರಿನ ಹರಿಕೃಷ್ಣ ಯುವತಿಗೆ ಮೋಸ ಮಾಡಿದ್ದ.ಮಂಡ್ಯ ತಾಲೂಕಿನ ಹೆಬ್ಬಕವಾಡಿಯಲ್ಲಿ ತಾಯಿ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುತ್ರಿ ವಿಜಯಲಕ್ಷ್ಮಿ (21) ಹಾಗೂ ತಾಯಿ ಲಕ್ಷ್ಮಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಹಿನ್ನೆಲೆ?: ಮಂಡ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪ್ರಿಯಕರ ಕೈ ಕೊಟ್ಟಿದ್ದರಿಂದ ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪುತ್ರಿಯ ಆತ್ಮಹತ್ಯೆಯಿಂದ ನೊಂದು ತಾಯಿ ಸಹ ನೇಣಿಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಮನೆಯಲ್ಲಿ ತಾಯಿ ಲಕ್ಷ್ಮಿ (50) ನೇಣಿಗೆ ಶರಣಾಗಿದ್ದಾರೆ. 25 ದಿನಗಳ ಹಿಂದೆ ಲಕ್ಷ್ಮಿ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಫೆಬ್ರವರಿ 21ರಂದು ರೈಲಿಗೆ ತಲೆಕೊಟ್ಟು ಪುತ್ರಿ ವಿಜಯಲಕ್ಷ್ಮಿ (21) ಆತ್ಮಹತ್ಯೆಗೆ ಶರಣಾಗಿದ್ದಳು. ಪಕ್ಕದ ಮಾರಸಿಂಗನಹಳ್ಳಿ ನಿವಾಸಿ ಹರಿಕೃಷ್ಣ ಮೋಸ ಮಾಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಒಂದುವರೆ ವರ್ಷದಿಂದ ವಿಜಯಲಕ್ಷ್ಮಿ ಮತ್ತು ಹರಿಕೃಷ್ಣ ಪ್ರೀತಿಸುತ್ತಿದ್ದರು ಎನ್ನಲಾಗಿದೆ.ಇತ್ತೀಚೆಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಸಂಪರ್ಕದಲ್ಲಿ ಇದ್ದ ಈ ಬಗ್ಗೆ ಪ್ರಶ್ನಿಸಿ ಯುವತಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಾಳೆ. ಮದುವೆಗೆ ನಿರಾಕರಿಸಿ ಹರಿಕೃಷ್ಣ ವಿಜಯಲಕ್ಷ್ಮಿ ಆವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದೆ.
ಇದರಿಂದ ಮನನೊಂದು ಮಂಡ್ಯದಲ್ಲಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಳು. ಕುರಿತು ವಿಜಯಲಕ್ಷ್ಮಿ ತಂದೆ ಮಂಡ್ಯ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದ. ನ್ಯಾಯ ಕೇಳಲು ಹೋದವರ ವಿರುದ್ಧವೆ ಪೊಲೀಸರು FIR ದಾಖಲಿಸಿದ್ದರು. ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷೀ ಶಿವ ಸಾಗಿಸಲು ಬಿಡದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಗ್ರಾಮಂತರ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಅವ್ರು ಹಾಕಿದ್ದಾರೆ.ಆರೋಪಿ ಹರಿಕೃಷ್ಣ ಮತ್ತು ಕುಟುಂಬದವರನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.