ಮನೆ Uncategorized ಗೋಲ್ಡ್ ಸ್ಮಗ್ಲಿಂಗ್ ಕೇಸ್ : ನಟಿ ರನ್ಯಾ ರಾವ್ ಳನ್ನು ಇಡಿ ವಶಕ್ಕೆ ಪಡೆಯುವ ಸಾಧ್ಯತೆ

ಗೋಲ್ಡ್ ಸ್ಮಗ್ಲಿಂಗ್ ಕೇಸ್ : ನಟಿ ರನ್ಯಾ ರಾವ್ ಳನ್ನು ಇಡಿ ವಶಕ್ಕೆ ಪಡೆಯುವ ಸಾಧ್ಯತೆ

0

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯರಾವ್ ಈಗಾಗಲೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ರನ್ಯಾ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಇದೀಗ ಇಡಿ ತನಿಖೆ ಚುರುಕುಗೊಳಿಸಲು ರನ್ಯಾರಾವ್ಳನ್ನು ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇಂದು ಕೋರ್ಟ್ನಲ್ಲಿ ಇಡಿ ಸ್ಟೇಟ್ಮೆಂಟ್ ಮಾಡಲಿದ್ದು, ಅರ್ಜಿ ಸಲ್ಲಿಕೆ ನಂತರ ಕಷ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ನಟಿ ರನ್ಯಾರಾವ್ ಅವರ ಡ್ಯಾಮಿನ ಅರ್ಜಿ ವಿತರಣೆ ಕೂಡ ನಡೆಯಲಿದೆ ಹಾಗಾಗಿ ಈ ಒಂದು ಪ್ರಕರಣ ಇದೀಗ ತೀವ್ರ ಕುತೂಹಲ ಮೂಡಿಸಿದೆ.