ಮನೆ ರಾಜ್ಯ ಬೇಸಿಗೆ ಹಿನ್ನೆಲೆ ನ್ಯಾಯಾಲಯಗಳಲ್ಲಿ ಕಪ್ಪು ಕೋಟ್ ಧರಿಸುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶ

ಬೇಸಿಗೆ ಹಿನ್ನೆಲೆ ನ್ಯಾಯಾಲಯಗಳಲ್ಲಿ ಕಪ್ಪು ಕೋಟ್ ಧರಿಸುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶ

0

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಮಾರ್ಚ್ 15 ರಿಂದ ಮೇ 31ರವರೆಗೂ ಕಪ್ಪು ಕೋಟ್ ಧರಿಸುವುದಕ್ಕೆ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಅಧಿಸೂಚನೆ ಹೊರಡಿಸಿದ್ದಾರೆ. ರಾಜ್ಯ ವಕೀಲರ ಪರಿಷತ್ ಮತ್ತು ಬೆಂಗಳೂರು ವಕೀಲರ ಸಂಘದ ಮನವಿಯ ಮೇರೆಗೆ ಈ ಅಧಿಸೂಚನೆ ಹೊರಡಿಸಿರುವ ರಿಜಿಸ್ಟ್ರಾರ್ ಜನರಲ್, ಬಿಳಿ ಬಣ್ಣದ ಶರ್ಟ್(ಅಂಗಿ) ಹಾಗೂ ಬ್ಯಾಂಡ್ ಧರಿಸುವುದಕ್ಕೆ ವಿನಾಯ್ತಿ ಇಲ್ಲ ಎಂದು ಅಧಿಸೂಚನೆಯಲ್ಲಿ ಹೇಳಿದೆ.

ಬಿಸಿಲ ಬೇಗೆ ಹೆಚ್ಚಾಗುತ್ತಿರುವುದರಿಂದ ಬೇಸಿಗೆ ಮುಗಿಯುವವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯದಲ್ಲಿನ ವಕೀಲರಿಗೆ ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘವು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಪತ್ರ ಬರೆದಿತ್ತು. ಈ ಪತ್ರದಲ್ಲಿ ಮಹಾರಾಷ್ಟ್ರ ಮತ್ತು ಗೋವಾಗಳಲ್ಲಿ ವಕೀಲರಿಗೆ ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ಕಲ್ಪಿಸಲಾಗಿದೆ. ಆ ಎರಡೂ ರಾಜ್ಯಗಳಂತೆ ರಾಜ್ಯದಲ್ಲೂ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಕಪ್ಪು ಕೋಟ್ ಧರಿಸುವುದಕ್ಕೆ ವಿನಾಯ್ತಿ ನೀಡಬೇಕೆಂದು ಮನವಿ ಮಾಡಲಾಗಿತ್ತು.