ಮೈಸೂರು : ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು ಹಾಗೂ ಮೈ ಭಾರತ್ ನೆಹರು ಯುವ ಕೇಂದ್ರ ಮೈಸೂರು ಇವರ ಸಹಯೋಗದೊಂದಿಗೆ ಚೋರನಹಳ್ಳಿ ಗ್ರಾಮದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಗಿಡವನ್ನು ನೆಡುವ ಮೂಲಕ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಯೋಜಕರಾದ ಶಶಿಕುಮಾರ್ ಮಾತನಾಡಿ ನಮ್ಮ ಸಂಸ್ಥೆಯು ಕಳೆದ 40 ವರ್ಷಗಳಿಂದ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮಹಿಳೆಯರ, ಮಕ್ಕಳ, ಯುವಜನರ ಮತ್ತು ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಾ ಬರುತ್ತಿದೆ. ಸ್ವಾಮಿ ವಿವೇಕಾನಂದರ ನಾಣ್ಣುಡಿ ಏಳಿ ಎದ್ದೇಳಿ ಯುವಕರೇ ಗುರಿ ಮುಟ್ಟುವ ತನಕ ನಿಲ್ಲದಿರಿ ಯುವಕರು ಸಮಾಜದ ಬದಲಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಕ್ರೀಡೆಗಳನ್ನು ಆಡುವುದರಿಂದ ದೈಹಿಕ ಸಾಮರ್ಥ್ಯತೆ ಮತ್ತು ಚಲನಶೀಲರಾಗಿರುತ್ತಾರೆ ಇತ್ತೀಚಿನ ದಿನದಲ್ಲಿ ಹವಾಮಾನ ವೈಪರಿತ್ಯದಿಂದ ಪರಿಸರ ನಾಶವಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಇಂದು ನಾವು ಪರಿಸರ ಸಂರಕ್ಷಣೆ ಮಾಡದಿದ್ದಲ್ಲಿ ಮುಂದಿನ ಪೀಳಿಗೆಗೆ ಅಪಾಯ ತಂದೊಡ್ಡಬೇಕಾಗುತ್ತದೆ. ಯುವಕರು ಮತ್ತು ಮಕ್ಕಳು ಪ್ಲಾಸ್ಟಿಕ್ ಕಡಿಮೆ ಬಳಸಬೇಕು ಮತ್ತು ಗಿಡಗಳನ್ನು ನೆಡುವ ಮೂಲಕ ಬದಲಾವಣೆಯನ್ನು ತರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಪ್ರಸನ್ನ ಕುಮಾರ್ ಶಿವಣ್ಣ ದೈಹಿಕ ಶಿಕ್ಷಣ ಶಿಕ್ಷಕರದ ಸುದರ್ಶನ್, ಪ್ರಶಾಂತ್, ಯುವಜನರು ಭಾಗವಹಿಸಿದ್ದರು. ವಿವಿಧ ಗ್ರಾಮಗಳಿಂದ ಆಗಮಿಸಿದಂತಹ ಯುವ ಜನರ ತಂಡಗಳಿಗೆ ವಾಲಿಬಾಲ್ ಬ್ಯಾಡ್ಮಿಂಟನ್ ಹಗ್ಗಜಗ್ಗಾಟ ಮತ್ತು 100 ಮೀಟರ್ ಓಟದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ವಿಜೇತರಾದ ತಂಡಗಳಿಗೆ ಬಹುಮಾನವನ್ನು ವಿತರಿಸಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರಗಳನ್ನು ನೀಡಲಾಯಿತು.