ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೈಕ್ಸ್ ಬ್ಯಾನರ್ ಅಳವಡಿಕೆ ಮಾಡಿದರೆ ಕ್ರಮ ಕೈಗೊಳ್ಳುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದರು ಡಿಕೆ ಶಿವಕುಮಾರ್ ಸೂಚನೆಯ ಮೇರೆಗೆ ಇದೀಗ ಬಿಬಿಎಂಪಿ ಒಟ್ಟು 12 ದಾಖಲಿಸಿದ್ದು 12 ಲಕ್ಷ ದಂಡ ವಸೂಲಿ ಮಾಡಿದೆ.
ಅನಧಿಕೃತವಾಗಿ ಬ್ಯಾನರ್ ಅಳವಡಿಸಿದ್ದವರ ವಿರುದ್ಧ 12 fir ದಾಖಲಾಗಿದ್ದು, 12 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ ಬಿಬಿಎಂಪಿ. ಪೂರ್ವ, ಪಶ್ಚಿಮ ಹಾಗು ಯಲಹಂಕ ವಲಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಸೂಚನೆ ಬೆನ್ನಲ್ಲೇ ಬಿಬಿಎಂಪಿ ಕಾರ್ಯಾಚರಣೆ ನಡೆಸಿದ್ದಾರೆ.
ಅನಧಿಕೃತ ಬ್ಯಾನರ್ ಹಾಕಿದ್ದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಬರೋಬ್ಬರಿ 1,350 ಫ್ಲೆಕ್ಸ್ ಬ್ಯಾನರ್ ತೆರವುಗೊಳಿಸಿದ್ದಾರೆ. ಪಾಲಿಕೆ ನಿನ್ನೆಯಿಂದ ಹಲವಡೆ ಕಾರ್ಯಾಚರಣೆ ನಡೆಸಿದೆ. ಯೂಥ್ ಕಾಂಗ್ರೆಸ್ ಸಮಾರಂಭ ಹಿನ್ನೆಲೆಯಲ್ಲಿ ಫ್ಲೇಕ್ಸ್ ಗಳನ್ನು ಹಾಕಲಾಗಿತ್ತು. ಬ್ಯಾನರ್ ಅಳವಡಿಸಿದ್ದವರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕ್ರಮಕ್ಕೆ ಸೂಚನೆ ನೀಡಿದ್ದರು.














