ಮೈಸೂರು (Mysuru): ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಂಗವಾಗಿ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ.
ಈ ನಡುವೆ ಮೋದಿ ಸಂಚರಿಸುವ ರಸ್ತೆಗಳಿಗೆ ಮಾತ್ರ ಡಾಂಬರು ಹಾಕಲಾಗುತ್ತಿದೆ. ಇದರಿಂದ ವರ್ಷದಿಂದ ಗುಂಡಿ ಬಿದ್ದಿದ್ದ ರಸ್ತೆಗಳಿಗೆ ಮುಕ್ತಿ ಸಿಕ್ಕಂತಾಗಿದೆ. ಜೊತೆಗೆ ಕೆಲವೇ ಕೆಲವು ರಸ್ತೆಗಳನ್ನು ಮಾತ್ರ ಸ್ವಚ್ಛಗೊಳಿಸಲಾಗುತ್ತಿದೆ.
ಎಂ. ಜಿ ರೋಡ್, ಅಗ್ರಹಾರ ರಸ್ತೆ, ಸ್ಪೀಚ್ ಅಂಡ್ ಹಿಯರಿಂಗ್ ರಸ್ತೆಗಳು ಮಾತ್ರ ಅಭಿವೃದ್ಧಿಯಾಗುತ್ತಿದೆ. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮೈಸೂರು ಹೆದ್ದಾರಿಯಲ್ಲಿ ಸ್ವಚ್ಛತಾ ಹಾಗೂ ತೆರವು ಕಾರ್ಯ ಭರದಿಂದ ಸಾಗಿದೆ. ಸಂಸದ ಪ್ರತಾಪ್ ಸಿಂಹ ಅವರು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮೋದಿ ಸಂಚರಿಸುವ ರಸ್ತೆಗಳನ್ನು ಮಾತ್ರ ಅಭಿವೃದ್ಧಿ ಪಡಿಸುತ್ತಿರುವುದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ನಗರದ ಗುಂಡಿ ಬಿದ್ದಿರುವ ಎಲ್ಲ ರಸ್ತೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.