ಮನೆ ರಾಜ್ಯ ರಾಜ್ಯದಲ್ಲಿ 525 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 525 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 525 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,55,309ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40066 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

228 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,12,024ಕ್ಕೆ ಏರಿಕೆಯಾಗಿದೆ. ಇನ್ನು 3117 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 494 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,90,766ಕ್ಕೆ ಏರಿಕೆಯಾಗಿದೆ. ‌