ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
352 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,912,376ಕ್ಕೆ ಏರಿಕೆಯಾಗಿದೆ. ಇನ್ನು 3,387 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 545 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,791,311ಕ್ಕೆ ಏರಿಕೆಯಾಗಿದೆ.