ಮನೆ ರಾಷ್ಟ್ರೀಯ ದೇಶದಲ್ಲಿ ಕೋವಿಡ್‌ ಹೆಚ್ಚಳ: 8,582 ಹೊಸ ಪ್ರಕರಣ ವರದಿ

ದೇಶದಲ್ಲಿ ಕೋವಿಡ್‌ ಹೆಚ್ಚಳ: 8,582 ಹೊಸ ಪ್ರಕರಣ ವರದಿ

0

ನವದೆಹಲಿ (New Delhi): ದೇಶದಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, 4ನೇ ಅಲೆಯ ಭೀತಿ ಎದುರಾಗಿದೆ. ಈ ನಡುವೆ ಇಂದು ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,582 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 04 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,22,017ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,761ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 4,435 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,52,743ಕ್ಕೆ ತಲುಪಿದೆ. ದೇಶದಲ್ಲಿ 44,513 ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,44,994 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 85,45,43,282 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,07,08,541 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.