ಮನೆ ಅಪರಾಧ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ

ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ

0

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ಹಿನ್ನೆಲೆಯಲ್ಲಿ ನೊಂದ ಐಶ್ವರ್ಯ ಎಂಬ ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಕಲಾಮಂದಿರ ಅಪಾರ್ಟ್ ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಐಶ್ವರ್ಯ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು. ವೆಬ್‌ಸೈಟ್ ಮೂಲಕ ಫಲಿತಾಂಶ ಹೊರ ಬೀಳುತ್ತಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಐಶ್ವರ್ಯ ಮಾಡಿಕೊಂಡಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.