ಮನೆ ರಾಜ್ಯ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

0

ಬೆಂಗಳೂರು(Bengaluru): ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ್ದಾರೆ.

ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಮೈಸೂರು ಪೇಟ, ರೇಷ್ಮೆ ಶಾಲು, ಹಾರ ಹಾಕಿ ಸನ್ಮಾನಿಸಿದರು.ಸೋಮವಾರ ಸಂಜೆ ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ಲಾಟಿನಂ ಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ಪಾಲ್ಗೊಳ್ಳುವರು‌.

ಕನಕಪುರ ರಸ್ತೆಯ ವಸಂತಪುರ ಸಮೀಪದ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ಮಂಗಳವಾರ ಉದ್ಘಾಟಿಸುವರು.