ಮೈಸೂರು(Mysuru): ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಶೇ 42.05ರಷ್ಟು ಮತದಾನವಾಗಿದೆ.
58,186 ಮತದಾರರ ಪೈಕಿ 24,470 ಮತದಾರರು ಹಕ್ಕು ಚಲಾಯಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ನಗರದ ಮಾನಸಗಂಗೋತ್ರಿ ಹಾಗೂ ಇತರ ಮತದಾನ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿ, ಮತದಾನ ಪ್ರಮಾಣದ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಪಡೆದರು.
ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ನಗರಪಾಲಿಕೆ ಸದಸ್ಯ ಗೋಪಿ ಜೊತೆಗಿದ್ದರು.