ಮನೆ ಉದ್ಯೋಗ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಯಂಗ್ ಪ್ರೊಫೇಶನಲ್‌ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಯಂಗ್ ಪ್ರೊಫೇಶನಲ್‌ ಹುದ್ದೆಗೆ ಅರ್ಜಿ ಆಹ್ವಾನ

0

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಉದ್ಯೋಗ ಪ್ರಕಟಣೆ ಹೊರಡಿಸಿದೆ. ಯಂಗ್ ಪ್ರೊಫೇಶನಲ್ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 130 ಹುದ್ದೆಗಳು ಖಾಲಿ ಇವೆ.

ಯಾವುದೇ ಪದವಿ ಮಾಡಿದವರು ಹಾಗೂ ಅನಾಲಿಟಿಕ್ಸ್‌, ಸ್ಟ್ಯಾಟಿಸ್ಟಿಕ್ಸ್‌, ಕಂಪ್ಯೂಟರ್ ಅರಿವು ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.  

ಗುತ್ತಿಗೆ ಆಧಾರಿತ ಹುದ್ದೆಯಾಗಿದ್ದು, ಭಾರತದಾದ್ಯಂತ ಎಲ್ಲಿ ನಿಯೋಜನೆ ಮಾಡಲಾಗುತ್ತದೆಯೋ ಅಲ್ಲಿ ಕೆಲಸ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ದಿನಾಂಕ 08-06-1982 ರಿಂದ 08-06-1998 ರ ನಡುವೆ ಜನಿಸಿರಬೇಕು.

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಾರ್ಯಾನುಭವ, ವಿದ್ಯಾರ್ಹತೆ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಜೂನ್‌ 22 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ವೆಬ್‌ಸೈಟ್‌ https://www.epfindia.gov.in/ ಗೆ ಭೇಟಿ ನೀಡಬಹುದು.