ಮನೆ ಅಪರಾಧ ಬೆಂಗಳೂರು ಚಂದಾಪುರದಲ್ಲಿ ಬಿಎಂಟಿಸಿ ಬಸ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು.!

ಬೆಂಗಳೂರು ಚಂದಾಪುರದಲ್ಲಿ ಬಿಎಂಟಿಸಿ ಬಸ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು.!

0

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿಯನ್ನು ಪಡೆದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಚಂದಾಪುರದ ಬಿಗ್ ಮಾರ್ಟ್ ಬಳಿ, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರನ್ನು ಕೇರಳ ಮೂಲದ ಅನಿಲ್ ಪಿ ಸುಂದರ್ (27) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಳಗ್ಗೆ ತನ್ನ ದಿನಚರಿಯ ನಿಮಿತ್ತ ರಸ್ತೆ ದಾಟುತ್ತಿದ್ದ ವೇಳೆ ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ಅನಿಲ್ ಗಂಭೀರವಾಗಿ ಗಾಯಗೊಂಡಿದ್ದರು.

ಪರಿಸರದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅನಿಲ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ, ವಾಹನದ ವೇಗ ನಿಯಂತ್ರಣ ತಪ್ಪಿದೆಯೇ ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ. ಘಟನೆಯ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿರುವ ಬಗ್ಗೆ ವರದಿಯಾಗಿದ್ದು, ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.